ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ.
ಹೌದು ಪತಿ ಪತ್ನಿ ನಡುವೆ ನಡೆದ ಜಗಳದಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಲತಂಗಡಿ ತಾಲೂಕಿನ ತೆಕ್ಕರು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಪತ್ನಿ ಜತೀನ್ ಳನ್ನು ಚಾಕುವಿನಿಂದ ಇರಿದು ಪತಿ ರಫೀಕ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.