ಬೆಂಗಳೂರು : ಕಳೆದ ಜೂನ್ ನಾಲ್ಕರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತೊಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಆರ್‌ಸಿಬಿ ವಿರುದ್ಧ ಕೇಶ ದಾಖಲಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಹೌದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ನ್ಯಾ.ಮೈಕಲ್ ಕುನ್ಹಾ ಸಮಿತಿಯ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಈ ವೇಳೆ ಆರ್ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧಾರಿಸಲಾಯಿತು. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧವು ಕೇಸ್ ದಾಖಲಿಸುವ ನಿರ್ಧರಿಸಲಾಗಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ವರದಿಯಲ್ಲೂ ಶಿಫಾರಸು ಮಾಡಲಾಗಿದೆ.