ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ OBC ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ ಮೀಸಲಾತಿಯ ಪರ ಬಿಜೆಪಿ ಇರಲಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯನವರು ತಮ್ಮನ್ನು ತಾವು ಅಹಿಂದ ಚಾಂಪಿಯನ್ ಎಂದು ಕರೆದುಕೊಳ್ಳುತ್ತಾರೆ, ಇತ್ತೀಚೆಗೆ ಕಾಂತರಾಜು ವರದಿಯನ್ನು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವುದಾಗಿ ಬೊಗಳೆ ಹೊಡೆಯತ್ತಿದ್ದವರು ದೆಹಲಿಯಿಂದ ದೂರವಾಣಿ ಕರೆ ಬಂದ ನಂತರ, ರಾಹುಲ್ ಗಾಂಧಿಯವರು ಆದೇಶ ಮಾಡಿದ್ದಾರೆಂದು 165 ಕೋಟಿ ಖರ್ಚು ಮಾಡಿ ಸಿದ್ಧಪಡಿಸಿದ್ದ ಕಾಂತರಾಜು ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದೀರಲ್ಲವೇ? ಆಗ ನಿಮ್ಮ ಹಿಂದುಳಿದವರ ಕಾಳಜಿ ಎಲ್ಲಿ ಹೋಗಿತ್ತು ? ಎಂದು ಕೇಳಿದ್ದಾರೆ.
ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಗಾಂಧಿ ಕುಟುಂಬ ನೋಡಿಕೊಂಡು ಬಂದಿದೆ. ಇಂಥ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಸಾಧ್ಯವೇ ಎಂದು ದೇಶದ ಹಾಗೂ ರಾಜ್ಯದ ಜನರು ಕೇಳುತ್ತಿದ್ದಾರೆ. ಬಿಹಾರ ರಾಜ್ಯದ ಚುನಾವಣೆ ಸಮೀಪಿಸುತ್ತಿರುವ ಕಾರಣ ಎಐಸಿಸಿಯ OBC ಸಮಿತಿಯು ಸಿದ್ದರಾಮಯ್ಯನವರ ಮೂಲಕ ಹಿಂದುಳಿದ ವರ್ಗಗಳ ಕುರಿತು ಮೊಸಳೆಕಣ್ಣೀರು ಹಾಕುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ನಡೆದ @INCIndia OBC ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ @siddaramaiah ನವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ ಮೀಸಲಾತಿಯ ಪರ ಬಿಜೆಪಿ ಇರಲಿಲ್ಲ ಎಂಬ… pic.twitter.com/VFiu7DrCIR
— Vijayendra Yediyurappa (@BYVijayendra) July 16, 2025
BREAKING: ಬೆಂಗಳೂರು ಕಾಲ್ತುಳಿತ ದುರಂತ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧಾರ
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!