ಬೆಂಗಳೂರು: ನಗರದಲ್ಲಿ ಜನರು ಬೆಚ್ಚಿ ಬೀಳುವಂತೆ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಸಂಬಂಧ ಐವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದರು. ಇಂತಹ ಆರೋಪಿಗಳಿಗೆ ಕೋರ್ಟ್ 10 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ಬೆಂಗಳೂರಿನ ಹಲಸೂರಿ ಕೆರೆಯ ಬಳಿಯಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣ ಸಂಬಂಧ ಐವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ ಶರಣಾಗಿದ್ದರು. ಈ ಆರೋಪಿಗಳನ್ನು ಬೆಂಗಳೂರಿನ ಮೆಯೋಹಾಲ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸಲು ತಮ್ಮ ವಶಕ್ಕೆ ಐವರು ಆರೋಪಿಗಳನ್ನು ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದಂತ ನ್ಯಾಯಾಲಯವು ನವೀನ್, ಪ್ಯಾಟ್ರಿಕ್, ಸಂತೋಷ್, ಕಿರಣ್, ವಿಮಲ್ ಗೆ 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಅಲ್ಲದೇ ಪೊಲೀಸರು ಆರೋಪಿಗಳ ಮೇಲೆ ಹಲ್ಲೆ ಮಾಡಿದಂತ ಕೋರ್ಟ್ ಸೂಚಿಸಿದೆ. ಜೊತೆಗೆ ಎರಡು ದಿನಕ್ಕೊಮ್ಮೆ ಬೆಳಗ್ಗೆ 2 ಗಂಟೆಗಳ ಕಾಲ ವಕೀಲರ ಭೇಟಿಗೆ ಅವಕಾಶ ನೀಡುವಂತೆ ಸೂಚಿಸಿದೆ.
BREAKING: ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 5 ಪಾಲಿಕೆ ಮಾಡುವುದಕ್ಕೆ ‘ರಾಜ್ಯ ಸಚಿವ ಸಂಪುಟ’ ಒಪ್ಪಿಗೆ
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!