ಬೆಂಗಳೂರು: ಪಿಎಸ್ ಐ ಪರೀಕ್ಷೆ ಬರೆದು ನ್ಯಾಯಬದ್ಧವಾಗಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದ ನಂತರವೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದೆ.
ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಗುರುವಾರ ನಗರದ ಫ್ರೀಡಂ ಪಾರ್ಕ್ ಬಳಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಜಾಗಕ್ಕೆ ತೆರಳಿ , ಅವರಿಗೆ ಪಕ್ಷದ ಪರವಾಗಿ ಬೆಂಬಲ ವ್ಯಕ್ತಪಡಿಸಿದರು.
ರಾಜ್ಯ ಸರಕಾರವು 2021ರಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 4 ವರ್ಷಗಳ ನಂತರ ಪರೀಕ್ಷೆ ನಡೆಸಿತ್ತು. 2024 ಡಿಸೆಂಬರ್ 26ರಂದು ಫಲಿತಾಂಶವನ್ನೂ ಪ್ರಕಟಿಸತ್ತು. ಅದಾದ ಮೇಲೆ ಪರೀಕ್ಷೆಯಲ್ಲಿ ಅರ್ಹರಾದ ಎಲ್ಲಾ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆದು 7 ತಿಂಗಳು ಕಳೆದರೂ ಇನ್ನೂ ನೇಮಕಾತಿ ಆದೇಶ ನೀಡದಿರುವುದು ಸರಿಯಲ್ಲ. ಕೂಡಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.
ಗೃಹ ಸಚಿವ ಪರಮೇಶ್ವರ್ ಅವರು ಕಳೆದ 3 ತಿಂಗಳಿಂದ ಆದೇಶ ಪತ್ರಗಳನ್ನು ಇಗೋ ಕೊಟ್ಟೆವು, ಅಗೋ ಕೊಟ್ಟೆವು ಎಂದು ಹೇಳುತ್ತಿದ್ದಾರೆ. ಅಭ್ಯರ್ಥಿಗಳು ಹಗಲಿರುಳು ವ್ಯಾಸಂಗ ಮಾಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ಅಭ್ಯರ್ಥಿಗಳಿಗೆ ಸರಕಾರ ಅನ್ಯಾಯ ಮಾಡಬಾರದು ಎಂದು ಅವರು ಆಗ್ರಹಿಸಿದರು.
ಸರಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಈಗಾಗಲೇ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೀಗ ಮತ್ತೆ ನಗರದಲ್ಲಿ ಧರಣಿಗೆ ಮುಂದಾಗಿದ್ದಾರೆ. ಸರಕಾರ ಈಗಲಾದರೂ ಅವರಿಗೆ ನೇಮಕಾತಿ ಪತ್ರಗಳನ್ನು ಕೊಟ್ಟು ಹುದ್ದೆಗಳಿಗೆ ನಿಯೋಜಿಸಬೇಕು ಎಂದು ರಮೇಶ್ ಗೌಡ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಹುತೇಕ ಎಲ್ಲಾ ಅಭ್ಯರ್ಥಿಗಳು ಹಾಜರಿದ್ದು, ಅವರೊಂದಿಗೆ ರಮೇಶ್ ಗೌಡರು ಮತುಕತೆ ನಡೆಸಿದರು. ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ನಿಮ್ಮ ಜತೆ ನಿಲ್ಲಲಿದೆ ಎಂದು ಭರವಸೆ ನೀಡಿದರು.
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!