ಬೆಂಗಳೂರು : ಜನಸ್ನೇಹಿ ಪೊಲೀಸ್ ವ್ಯವಸ್ಥೆ ಭಾಗವಾಗಿ ‘ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಕಾರ್ಯ ಕ್ರಮವನ್ನು ರಾಜ್ಯ ಗೃಹ ಇಲಾಖೆ ಹಮ್ಮಿಕೊಂಡಿದೆ. ಬೆಳಗ್ಗೆ 10.30ಕ್ಕೆ ಗೋವಿಂದರಾಜನಗರ ವಾರ್ಡ್ನಲ್ಲಿರುವ ಎಂ.ಸಿ. ಲೇಔಟ್ನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ-ಸೀಮಂತ್ಕುಮಾರ್ ಸಿಂಗ್ ವಿಧ್ಯುಕ್ತ ವಾಗಿ ಚಾಲನೆ ನೀಡಲಿದ್ದಾರೆ.
‘ಮನೆ ಮನೆಗೆ ಪೊಲೀಸ್’ ಕಾರ್ಯ ಕ್ರಮದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮುಕ್ತವಾಗಿ ಮಹಿಳೆಯರ ಸಮಸ್ಯೆಯನ್ನು ಬೀಟ್ಗಳಲ್ಲಿಯೇ ಆಲಿಸಲಿದ್ದಾರೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಖಾತ್ರಿಪಡಿಸಿ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದು, ಕೌಟುಂಬಿಕ ದೌರ್ಜನ್ಯ ವಿರುದ್ಧ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸಲಿದ್ದಾರೆ.
ಈಗಾಗಲೇಪ್ರತಿಯೊಂದು ಠಾಣಾ ವ್ಯಾಪ್ತಿಗಳಲ್ಲಿ ಸಬ್-ಬೀಟ್ಗಳನ್ನಾಗಿ ವಿಂಗಡಿಸಿ ಸಿಬ್ಬಂದಿ ನೇಮಿಸಲಾಗಿದೆ. ಇನ್ನು ಮುಂದೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆ ಮನೆಗೂ ಭೇಟಿ ನೀಡಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ.