ಗದಗ : ನಾವು ಯಾವತ್ತಿದ್ದರೂ ಪಾರ್ಟಿ ನೋಡುತ್ತೇವೆ. ನಾನು ಇರಲಿ, ರೆಡ್ಡಿ ಇರಲಿ ಬೇರೆ ಯಾರೇ ಇದ್ದರೂ ಪಾರ್ಟಿ ಹಿತದೃಷ್ಟಿಯಿಂದ ಒಂದಾಗಬೇಕು ಒಂದಾಗಿಯೇ ಇರುತ್ತೇವೆ ಎಂದರು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ಅವರು, ಅಂದಿನ ಪರಿಸ್ಥಿತಿಯಲ್ಲಿ ಒಬ್ಬರಿಗೊಬ್ಬರು ಬಾಯಿ ಮಾಡಿಕೊಂಡಿದ್ದು ನಿಜ, ಆವತ್ತಿನ ದಿನ ನಾನು ಮಾತನಾಡಿದ್ದು ತಪ್ಪು, ಅವರು ಮಾತನಾಡಿದ್ದು ತಪ್ಪು. ಆವತ್ತಿನ ಬೆಳವಣಿಗೆ ಎಲ್ಲವೂ ಮರೆತು ಹೋಗಿದ್ದೇವೆ ಎಂದು ಬಿಜೆಪಿ ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಗದಗದಲ್ಲಿ ಮಾತನಾಡಿದ ಅವರು, ನನ್ನ ಮತ್ತು ಜನಾರ್ದನ ರೆಡ್ಡಿ ನಡುವೆ ಸಚಿವ ವಿ. ಸೋಮಣ್ಣ ಸಂಧಾನ ನಡೆಸುತ್ತಿರುವ ವಿಷಯದ ಕುರಿತು ಮಾತನಾಡಿದ ಶ್ರೀರಾಮುಲು, ನನ್ನ ಹಾಗೂ ಜನಾರ್ದನ ರೆಡ್ಡಿ ನಡುವೆ ಗೊಂದಲವೇ ಇಲ್ಲ. ಅವತ್ತಿನ ಪರಿಸ್ಥಿತಿಯಲ್ಲಿ ಜನಾರ್ದನ ರೆಡ್ಡಿ ಒಂದು ಮಾತು ಆಡಿದರು. ನಾನೂ ಒಂದು ಮಾತಾಡಿದೆ. ಅಧಿಕಾರ ವಿಷಯವಾಗಿ ನಾವುಗಳು ಗೊಂದಲ ಮಾಡಿಕೊಂಡಿಲ್ಲ. ಸಂಧಾನ ಮಾಡುವ ಪರಿಸ್ಥಿತಿ ಎಲ್ಲಿ ಬಂದಿದೆ ಎಂದು ಪ್ರಶ್ನಿಸಿದರು. ನಮ್ಮದು ಸ್ವಾರ್ಥ ಇಲ್ಲದ ರಾಜಕೀಯ, ಪಾರ್ಟಿ ಹಿತದೃಷ್ಟಿಯಿಂದ ರಾಜಕೀಯವಾಗಿ ಒಂದಾಗುತ್ತೇವೆ ಎಂದು ತಿಳಿಸಿದರು.