ಗದಗ : ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ಹಲವು ಬೆಳವಣಿಗೆಯಾಗಿದ್ದು ಒಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಮುಂದುವರೆಯುತ್ತಾರೆ ಎಂದು ಅವರ ಬೆಂಬಲಿಗರು ಹೇಳಿಕೆ ನೀಡುತ್ತಿದ್ದಾರೆ ಇನ್ನೊಂದು ಕಡೆ ಬಿಜೆಪಿ ರೆಬೆಲ್ ಟೀಮ್ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಲೇಬೇಕು ಎಂದು ನಿರಂತರವಾಗಿ ಸಭೆಗಳನ್ನು ನಡೆಸುತ್ತಿದೆ. ಇದೀಗ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಅವರು ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ವಾತಾವರಣ ಇದೆ ಎಂದು ಹೇಳಿಕೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಷಯದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ. ಪಕ್ಷ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ಪ್ರಕ್ರಿಯೆ ನಡೆದು ಬಳಿಕ ಘೋಷಣೆಯಾಗಲಿದೆ. ನಮ್ಮ ಪಕ್ಷದಲ್ಲಿ ಯಾವುದೇ ಬದಲಾವಣೆ ಆಗುತ್ತದೆ ಅಂತಾ ಅನಿಸಲ್ಲ. ಸದ್ಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ, ಹಾಲಿ ಅಧ್ಯಕ್ಷರ ಅವಧಿ ಮುಗಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷದಲ್ಲಿ ದಲಿತರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎನ್ನುವ ವಾತಾವರಣ ಇದೆ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ದಲಿತರಿಗೆ ಸಿಗಬೇಕು ಎನ್ನುವ ತಮ್ಮ ಅಭಿಪ್ರಾಯ ಹಂಚಿಕೊಂಡರು