ಬೆಂಗಳೂರು : ಬೆಂಗಳೂರಿನ ಒಟ್ಟು 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬೆದರಿಕೆ ಸಂದೇಶ ನೀಡಲಾಗಿದೆ. ಇಮೇಲ್ ಮೂಲಕ ಬೆದರಿಕೆ ಸಂದೇಶ ಕೇಳಿ ಬಂದಿದೆ.
ಬೆಂಗಳೂರು ನಗರದ ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನು ಅದೇ ರೀತಿಯಾಗಿ ದೆಹಲಿಯ ಒಟ್ಟು 10 ಶಾಲೆಗಳಲ್ಲಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.