ಮೈಸೂರು : ಬೆಂಗಳೂರಿನ ಸುಮಾರು 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಈ ವಿಚಾರವಾಗಿ ಮೈಸೂರಲ್ಲಿ ಸುಳ್ಳು ಮಾಹಿತಿ ನೀಡುತ್ತಾರೆ ಅಲ್ವಾ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು.
ಮಾಧಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹುಸಿ ಬಾಂಬ್ ಬೆದರಿಕೆ ಎನ್ನುವುದರ ಬಗ್ಗೆ ಪೊಲೀಸರಿಗೆ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ. ಈ ರೀತಿ ಸುಳ್ಳು ಮಾಹಿತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು.
ಹೌದು ಇಂದು ಬೆಂಗಳೂರು ನಗರದ ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.