ನವದೆಹಲಿ: ಭಿಲಾಯ್ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ: ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಾಗೇಲ್ ಪುತ್ರನ ಬಂಧನವಾಗಿದೆ.
ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ರಾಜ್ಯದಲ್ಲಿ ಬಹುಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಬಂಧಿಸಿದೆ.
ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ದುರ್ಗ್ ಜಿಲ್ಲೆಯ ಭಿಲಾಯ್ನಲ್ಲಿರುವ ಬಘೇಲ್ ಕುಟುಂಬದ ನಿವಾಸದಲ್ಲಿ ಏಜೆನ್ಸಿ ಹೊಸ ಶೋಧ ನಡೆಸಿದ ಕೆಲವೇ ಗಂಟೆಗಳ ನಂತರ ಈ ಬಂಧನ ನಡೆದಿದೆ.