ಬೆಂಗಳೂರು: ಅನಾರೋಗ್ಯದಿಂದ ಮೃತಪಟ್ಟಿದ್ದ ಹಿರಿಯ ಪತ್ರಕರ್ತ ಚನ್ನರಾಯಪಟ್ಟಣದ ಹೇಮಕುಮಾರ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ತೀವ್ರ ಸಂಕಷ್ಟದಲ್ಲಿದ್ದ ಹೇಮಕುಮಾರ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಮೂಲಕ ಮನವಿ ಸಲ್ಲಿಸಿದ್ದನ್ನು ಪರಿಗಣಿಸಿ ಸಿಎಂ ಪರಿಹಾರ ಮಂಜೂರು ಮಾಡಿದ್ದರು.
ತಮ್ಮದೇ ಬ್ಯಾಂಕ್ ಅಕೌಂಟ್ ಗೆ ಪರಿಹಾರ ಹಣ ಬಂದಿರುವುದನ್ನು ಹೇಮಕುಮಾರ್ ಅವರ ಪತ್ನಿ ಗಿರಿಜಾ ಅವರು ಪೋನ್ ಮಾಡಿ ಖಚಿತಪಡಿಸಿ ಧನ್ಯವಾದ ತಿಳಿಸಿದ್ದಾರೆ.
ಹಾಸನದ ನಾಡಸಹ್ಯಾದ್ರಿ, ಜ್ಞಾನದೀಪ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಹೇಮಕುಮಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಕೆಯುಡಬ್ಲ್ಯೂಜೆ ಧನ್ಯವಾದ:
ಸಂಕಷ್ಟದಲ್ಲಿದ್ದ ಹೇಮಕುಮಾರ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಮತ್ತು ಇದಕ್ಕಾಗಿ ಪೂರ್ಣ ಸಹಕಾರ ನೀಡಿದ್ದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ(ಕೆಯುಡಬ್ಲ್ಯೂಜೆ) ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಧನ್ಯವಾದ ಸಲ್ಲಿಸಿದ್ದಾರೆ.
ಸರ್ಕಾರದ ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ. ಸಾಲ : ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ