ಕೊಪ್ಪಳ : ರಾಜ್ಯದಲ್ಲಿ ಹೃದಯಘಾತ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಿಗ್ಗೆ ತಾನೇ ಹಾಸನದಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನಪ್ಪಿದ್ದರು. ಇದೀಗ ಕೊಪ್ಪಳದಲ್ಲಿ ಹೃದಯಾಘಾತದಿಂದ ಯೋಗ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ.
ಹೌದು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಿರೇಬೆನಕಲ್ನಲ್ಲಿ ಬಂಡಿ ಗ್ರಾಮದ ಶಾಂತವೀರ ಸ್ವಾಮಿ ಗಂಗಾಧರ ಮಠ (57) ಎಂಬ ಯೋಗ ಶಿಕ್ಷಕರು ಸಾವನ್ನಪ್ಪಿದ್ದಾರೆ. ಶುಕ್ರವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ (Hubballi) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಹೃದಯಾಘಾತದಿಂದ ಐದು ಜನ ಸಾವನ್ನಪ್ಪಿದ್ದು, ಎರಡೇ ದಿನದಲ್ಲಿ ಮೂವರು ಸಾವನ್ನಪ್ಪಿದ್ದಾರೆ