ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿಯಾಗಿ 25 ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿಯಾಗಿ 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಬೆಂಗಳೂರಿನಿಂದ ಕುದುರೆ ಮುಖಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ದಟ್ಟ ಮಂಜು ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.