ಮೈಸೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ, ಎಸ್ಐಟಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ. ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ ಹೇಳಿಕೆಯೂ ಗಮನಾರ್ಹವಾಗಿದೆ. ಮಹಿಳಾ ಆಯೋಗವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಠಾಣೆಗಳು ಈ ಹಿಂದಿನ ನಾಪತ್ತೆ ಮತ್ತು ಸಾವು ಪ್ರಕರಣಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ ಎಂಬ ಗಂಭೀರ ಆರೋಪಗಳನ್ನೂ ಗುರುತಿಸಿದೆ.
ಕಳೆದ 20 ವರ್ಷಗಳಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವರದಿಯಾಗಿರುವ ನಾಪತ್ತೆಯಾದ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಸಮಗ್ರ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ಐಟಿ ರಚನೆಯ ಅಗತ್ಯವಿದೆ ಎಂದು ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ, ಎಸ್ಐಟಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ.
ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ. pic.twitter.com/m29DQJG2s0
— Siddaramaiah (@siddaramaiah) July 18, 2025