ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಬೀಳಲಿದ್ದು, ಮುಂದಿನ ಅಧಿವೇಶನದಲ್ಲಿ ದ್ವೇಷ ಭಾಷಣ ವಿರುದ್ಧ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹೌದು, ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ದ್ವೇಷ ಭಾಷಣ ವಿರುದ್ಧ ಕಾಯ್ದೆ ಜಾರಿಗೆ ತರಲು ನಿರ್ಧರಿಸಿದ್ದು, ಈಗಾಗಲೇ ಕಾಯ್ದೆ ಕರಡು ಪ್ರತಿ ತಯಾರಿಸಿದೆ.
ಯಾವುದೇ ವ್ಯಕ್ತಿ ಅಥವಾ ವ್ಯಕ್ತಿಗಳ ಧರ್ಮ, ಜಾತಿ, ಪಂಗಡ, ಲಿಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ, ನ್ಯೂನತೆ ಆಧರಿಸಿ ದ್ವೇಷ ಪೂರ್ವ ಮಾತುಗಳನ್ನಾಡುವುದು ನಿರ್ಬಂಧ. ಧರ್ಮಾಧಾರಿತವಾಗಿ ಟೀಕೆ ನಿಷೇಧ ವಿಧಿಸಿ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.