ಕಲಬುರ್ಗಿ : ಮೈಸೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ಮಾಡುತ್ತಿರುವ ವಿಚಾರವಾಗಿ ಸಿದ್ದರಾಮಯ್ಯ ಕುರ್ಚಿ ಅಲ್ಲಾಡುವಾಗ ಈ ರೀತಿ ಸಮಾವೇಶ ಮಾಡುತ್ತಾರೆ. ಅಸ್ಥಿರತೆ ಕಾಡಿದಾಗೆಲ್ಲ ಈ ರೀತಿ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯೇಂದ್ರ ಹೇಳಿಕೆ ನೀಡಿದರು.
ಕಲ್ಬುರ್ಗಿಯಲ್ಲಿ ಮಧ್ಯಮಾಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು, ತಮ್ಮ ಅಸ್ತಿತ್ವಕ್ಕಾಗಿ ಸಿದ್ದರಾಮಯ್ಯ ಸಮಾವೇಶ ಮಾಡುತ್ತಾರೆ. ಶಾಸಕರ ಅಸಮಾಧಾನ ಶಮನ ಮಾಡಲು ಸುರ್ಜೆವಾಲಾ ಪ್ರಯತ್ನಿಸುತ್ತಾರೆ. ಕಾಂಗ್ರೆಸ್ ನಲ್ಲಿ ಒಳಗೊಳಗೆ ಕುದುರೆ ವ್ಯಾಪಾರ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು ಒಳಗೊಳಗೆ ಕತ್ತಿ ಮಸೆಯುತ್ತಿದ್ದಾರೆ ಎಂದು ಕಲ್ಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು.