ಬಾಗಲಕೋಟೆ : ಬಾಗಲಕೋಟೆಯ ಜಿಲ್ಲೆಯ ಪ್ರಸಿದ್ಧ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಶ್ರೀ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬಸವ ಜಯ ಮೃತ್ಯುಂಜಯ ಶ್ರೀ ಗಳಿಗೆ ತಲೆ, ವಾಂತಿ ಹಾಗು ಎದೆ ನೋವು ಮತ್ತು ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಜಯಮೃತ್ಯುಂಜಯ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಜಯ ಮೃತ್ಯುಂಜಯ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಚೆ ನೀಡಲಾಗುತ್ತಿದೆ. ಇನ್ನೊಂದೆಡೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ್ದು ವಿವಾದವಾಗಿತ್ತು. ಬೀಗ ಹಾಕಿದ ಹಿನ್ನೆಲೆಯಲ್ಲಿ ಜಯ ಮೃತ್ಯುಂಜಯ ಶ್ರೀಗಳು ಬಹಳ ನೊಂದುಕೊಂಡಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.