ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಜಿಲ್ಲೆಯ ಜನರಿಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ಹಲವಡೆ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ಅದರಲ್ಲೂ ಚಿಕ್ಕಮಂಗಳೂರು, ಉತ್ತರ ಕನ್ನಡ ದಕ್ಷಿಣಕನ್ನಡಗಳಲ್ಲಿ ಗುಡ್ಡ ಕುಸಿದು ರಸ್ತೆಗಳು ಸಂಪೂರ್ಣ ಬಂದ್ ಆಗಿದ್ದವು. ಇದೀಗ ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.