ಮಂಡ್ಯ : ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ ಬಂದು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಾಧನ ಸಮಾವೇಶ ಹಮ್ಮಿಕೊಂಡಿದೆ. ಇವಂದು ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ವೇಳೆ ಮಂಡ್ಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿದೆ.
ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿದೆ., ಬೆಂಗಾವಲು ಕಾರಿನಲ್ಲಿ ಇದ್ದಂತಹ ಇಬ್ಬರು ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇಲಿ ಈ ಒಂದು ಘಟನೆ ನಡೆದಿದೆ ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಟಿ ಎಂ ಹೊಸೂರು ಬಳಿ ಟಿಎಂ ಹೊಸೂರು ಬಳಿ ಅಪಘಾತ ಸಂಭವಿಸಿದೆ.ಗಾಯಗೊಂಡಿದ್ದ ಸಿಬ್ಬಂದಿಗಳನ್ನು ತಕ್ಷಣ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.