ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಬೆಂಗಳೂರಿನ ಭಾರತೀನಗರ ಪೊಲೀಸ್ ಠಾಣೆಗೆ ತೆರಳಿದಂತ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರು, ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಮುಂದೆ ವಿಚಾರಣೆಗೆ ಹಾಜರಾದರು. ಅವರನ್ನು ಪೊಲೀಸ್ ತನಿಖಾಧಿಕಾರಿ ಬಿಕ್ಲು ಶಿವ ಕೊಲೆ ಕೇಸ್ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ.
ಅಂದಹಾಗೇ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಭೈರತಿ ಬಸವರಾಜ್ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈಗಾಗಲೇ ಈ ಪ್ರಕರಣದಲ್ಲಿ ಐವರು ಆರೋಪಿಗಳು ತಾವೇ ಕೊಲೆ ಮಾಡಿದ್ದು ಎಂಬುದಾಗಿ ಸ್ವಯಂ ಪ್ರೇರಿತರಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಲ್ಟಿ ಮೋಡ್ ಟ್ರಾನ್ಸ್‍ಪೋರ್ಟ್ ಸಿಸ್ಟಂ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ