ಹಾಸನ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೀನಾಕ್ಷಿ, ಪ್ರತಾಪ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದ್ದಾವೆ. ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚನ್ನಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅ.1ರಿಂದ ಭಾರತ-ಇಎಫ್‌ಟಿಎ ವ್ಯಾಪಾರ ಒಪ್ಪಂದ ಜಾರಿ; 1 ಮಿಲಿಯನ್ ಉದ್ಯೋಗ ಸೃಷ್ಟಿ- ಪಿಯೂಷ್ ಗೋಯಲ್
ಜುಲೈ.21, 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut