ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಪೀಣ್ಯದ ಎರಡನೇ ಹಂತದಲ್ಲಿ ಬಿಎಂಟಿಸಿ ಬಸ್ ಒಂದು ರಸ್ತೆ ಬದಿಯ ಕ್ಯಾಂಟೀನ್ ಗೆ ಡಿಕ್ಕಿ ಹೊಡೆದಿದೆ ಈ ವೇಳೆ ರಸ್ತೆ ಮೇಲೆ ನಿಂತಿದ್ದ ಇವರು ಜನರ ಮೇಲೆ ಬಿಎಂಟಿಸಿ ಬಸ್ ಹರಿದಿದೆ ಈ ಪ್ರಕರಣದಲ್ಲಿ ಚಿಕಿತ್ಸೆಫಲಕಾರಿಯಾಗಿದೆ 25 ವರ್ಷದ ಸುಮಾ ಎನ್ನುವ ಯುವತಿ ಸಾವನ್ನಪ್ಪಿದ್ದಳು ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಬಿಎಂಟಿಸಿ ಬಸ್ ಚಾಲಕನ ವಿರುದ್ಧ FIR ದಾಖಲಾಗಿದೆ.
ಹೌದು ಶುಕ್ರವಾರ, ಜುಲೈ 18, 2025 ರಂದು ಬೆಂಗಳೂರಿನ ಪೀಣ್ಯ ಎರಡನೇ ಹಂತದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ನಿಂದ ಅಪಘಾತ ಸಂಭವಿಸಿ ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಬಸ್ ಚಾಲಕನ ಬದಲಿಗೆ ನಿರ್ವಾಹಕ ಬಸ್ ಚಲಾಯಿಸುತ್ತಿದ್ದನು, ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಬಸ್ ಹರಿದಿದೆ ಮೃತ ಯುವತಿಯನ್ನು ಸುಮಾ (25) ಎಂದು ಗುರುತಿಸಲಾಗಿದೆ. ಅವರು ಹೆಬ್ಬಾಳದ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.
ಈ ಅಪಘಾತದಲ್ಲಿ ಮಗು ಸೇರಿದಂತೆ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ರಸ್ತೆ ಬದಿಯಲ್ಲಿದ್ದ ಕ್ಯಾಂಟೀನ್‌ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಮಾ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ, ಅಜಾಗರುಕತೆಯಿಂದ ಚಾಲನೆ ಮಾಡಿ ಅಪಘಾತ ಮಾಡಿದ್ದಾರೆ ಎಂದು ಸಲ್ಮಾ ಸುಲ್ತಾನ್ ನೀಡಿದ ದೂರಿನ ಅನ್ವಯ FIR ದಾಖಲು ಮಾಡಿಕೊಳ್ಳಲಾಗಿದೆ. ಪೀಣ್ಯದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಿಕೊಳ್ಳಲಾಗಿದೆ.