ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬಾಗೀನ ಅರ್ಪಣೆ ಮಾಡಿದರು.
ಕಬಿನಿ ಜಲಾಶಯವು ಈಗಾಗಲೇ ಭರ್ತಿಯಾಗಿದೆ, ಆದ್ದರಿಂದ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದರು. ಕಬಿನಿ ಜಲಾಶಯವು ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೃಷ್ಣರಾಜ ಸಾಗರ ಜಲಾಶಯಕ್ಕೆ ಜೂನ್ ತಿಂಗಳಲ್ಲೇ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ. ಇದೀಗ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿಶಿಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು ಈ ವೇಳೆ ಸಚಿವರಾದ ಎಚ್.ಸಿ ಮಹದೇವಪ್ಪ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದರು.