ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆ ಆದೇಶವನ್ನು ಹೊರಡಿಸಿದೆ.
ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಹಂತಿ ಅವರ ನೇತೃತ್ವದ ತಂಡದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್ ಅಧಿಕಾರಗಳ ತಂಡವು ಈ ವಿಶೇಷ ತನಿಖಾ ತಂಡದಲ್ಲಿದೆ. ಈ ತಂಡದಲ್ಲಿ ಅನುಚೇತ್ , ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್ ಪ್ರಕರಣದ ಬಗ್ಗೆ ತನಿಖೆ ಶುರು ಮಾಡಲಿದೆ ಎನ್ನಲಾಗಿದೆ.