ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಮೃತರನ್ನು ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಬಸವರಾಜ ಕೆಂಗೇರಿ (40) ಹಾಗೂ ಪುತ್ರ ಧರೆಪ್ಪ ಬಸವರಾಜ ಕೆಂಗೇರಿ (14) ಎಂದು ತಿಳಿದುಬಂದಿದೆ.
ಬಸವರಾಜ ಪತ್ನಿ ತವರೂರು ಮಳಗಲಿ ಗ್ರಾಮದಲ್ಲಿರುವ ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ನೀರು ತರಲು ಹೋಗಿದ್ದ ಬಸವರಾಜ ಪುತ್ರ ಧರೆಪ್ಪ, ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದರು. ತಕ್ಷಣ ಇಬ್ಬರ ರಕ್ಷಣೆಗೆ ದೌಡಾಯಿಸಿದ ಬಸವರಾಜ ಮತ್ತು ಪುತ್ರ ಧರೆಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಪೊಲೀಸರು ಮಾಹಿತಿ ನೀಡಿದ್ದಾರೆ.