ಬೆಳಗಾವಿ : ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಹಾಸನ ಜಿಲ್ಲೆಯೊಂದರಲ್ಲಿ ಸುಮಾರು 45ಕ್ಕೂ ಹೆಚ್ಚು ಜನರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇದೀಗ ಬೆಳಗಾವಿಯಲ್ಲಿ ಯುವ ವಕೀಲರೊಬ್ಬರು ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಬೆಳಗಾವಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಯುವ ವಕೀಲ ಸುಭಾಷ್ ದೇಸಾಯಿ (36) ಸಾವನ್ನಪ್ಪಿದ್ದಾರೆ. ನಿನ್ನೆ ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ಅವರಿಗೆ ಹೃದಯಘಾತವಾಗಿದೆ ಕಾಕತಿ ಗ್ರಾಮದ ವಕೀಲರಾಗಿರುವ ಸುಭಾಷ್ ಹೋಟೆಲ್ ಬಳಿ ಬಂದು ಟ್ಯಾಬ್ಲೆಟ್ ತೆಗೆದುಕೊಂಡಿದ್ದಾರೆ. ಕರಿಯ ಗಾತ್ರದಿಂದ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಆದರೆ ಮಾರ್ಗಮ ಮಧ್ಯೆ ವಕೀಲ ಹೃದಯಾಘಾತದಿಂದ ಸಾವನಪ್ಪಿದ್ದಾರೆ.