ಮಂಡ್ಯ : ಮಂಡ್ಯದಲ್ಲಿ ಘೋರ ದುರಂತ ನಡೆದಿದ್ದು, ಮಂಡ್ಯದ ಮೀಮ್ಸ್ ಹಾಸ್ಟೆಲ್ ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಕೊಪ್ಪಳ ಮೂಲದ ಭರತ್ ಯತ್ತಿನಮನೆ ಎಂದು ತಿಳಿದುಬಂದಿದೆ. ಪ್ರಥಮ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ. ಭರತ್ ನಿನ್ನೆ ರಾತ್ರಿ ಹಾಸ್ಟೆಲ್ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.