ನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ನಲ್ಲಿ ಇಡಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಾಧೀಶರು ಅರ್ಜಿಯನ್ನು ವಜಾ ಗೊಳಿಸಿದ್ದಾರೆ. ಈ ಮೂಲಕ ಸಿಎಂ ಪತ್ನಿ ಪಾರ್ವತಿ ಅವರಿಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಿದೆ.
ಹೌದು ಸಿಎಂ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್ ನಲ್ಲಿ ರಿಲೀಫ್ ಸಿಕ್ಕಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ವತಿ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡೀ ಅರ್ಜಿ ಸಲ್ಲಿಸಿತ್ತು. ಇದೀಗ ಇಡಿ ಸಲ್ಲಿಸಿದ ಅರ್ಜಿ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮುಡಾದಿಂದ ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣದಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ರಿಲೀಫ್ ಸಿಕ್ಕಿದೆ.