ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.
ಮಂಗಳೂರಿನಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22 ರವರೆಗೆ ನಡೆಯಲಿದೆ, ಅಗತ್ಯ ಬಿದ್ದರೆ ಅಧಿವೇಶನ ಅವಧಿಯನ್ನು ವಿಸ್ತರಿಸುವ ಕುರಿತಂತೆ ಸ್ಪೀಕರ್ ಅಧ್ಯಕ್ಷತೆಯ ಮತ್ತು ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರನ್ನು ಒಳಗೊಂಡ ಸಲಹಾ ಸಮಿತಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.