ರಾಯಚೂರು : ರಾಯಚೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಊಟ ಸೇವಿಸಿ ಅಸ್ವಸ್ಥಗೊಂಡಿದ್ದ ತಂದೆ, ಮಗಳು ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ತಂದೆ ರಮೇಶ್ (35) ಹಾಗೂ ಮಗಳು ನಾಗಮ್ಮ (8) ಮೃತರು.ಅಸ್ವಸ್ಥಗೊಂಡಿದ್ದ ಪತ್ನಿ, ಮೂವರು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ತಂದೆ ಹಾಗೂ ಮಗಳು ಮೃತಪಟ್ಟಿದ್ದಾರೆ.
ಪತ್ನಿ ಪದ್ಮಾವತಿ(34), ಮಗಳು ದೀಪಾ(6) ಸ್ಥಿತಿ ಗಂಭೀರವಾಗಿದೆ. ಇಬ್ಬರಿಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಾದ ಕೃಷ್ಣ, ಚೈತ್ರಾ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.