ಬೆಂಗಳೂರು : ಬೆಂಗಳೂರಿನ ಜನತೆಗೆ BMRCL ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಆರ್ ವಿ ರೋಡ್ ನಿಂದ ಬೊಮ್ಮಸಂದ್ರ ಮೆಟ್ರೋ ಸಂಚಾರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಯಲ್ಲೋ ಲೈನ್ ಮೆಟ್ರೋ ಸಂಚಾರ ಆರಂಭವಾಗಲಿದೆ.
ಈಗಾಗಲೇ ವಾಣಿಜ್ಯ ಸಂಚಾರಕ್ಕೆ ಬಿಎಮ್ಆರ್ಸಿಎಲ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೊದಲ ಹಂತವಾಗಿ ಇಂದು ಸುರಕ್ಷತಾ ಆಯುಕ್ತರಿಂದ ಪರಿಶೀಲನೆ ನಡೆಯಲಿದೆ. ಇಂದಿನಿಂದ ಜುಲೈ 25 ರವರೆಗೆ CMRC ಸುರಕ್ಷತಾ ಪರೀಕ್ಷೆ ನಡೆಸಲಿದೆ. CMRC ಕಮಿಷನರ್ ಎಂ ಚೌದರಿ ನೇತೃತ್ವದಲ್ಲಿ ಸುರಕ್ಷತಾ ಪರಿಶೀಲನೆ ನಡೆಯಲಿದೆ. ಈ ಮಾರ್ಗದ 16 ನಿಲ್ದಾಣಗಳಲ್ಲೂ ಸುರಕ್ಷತಾ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಬೆಂಗಳೂರು ಜನತೆಗೆ ಇದೀಗ ಮತ್ತೊಂದು ಮೆಟ್ರೋ ಸೇವೆ ಅರಭವಾಗಲಿದೆ.