ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ತಾನೆ, ಬೆಂಗಳೂರಿನ ಪೀಣ್ಯದ ಎರಡನೇ ಹಂತದಲ್ಲಿ ರಸ್ತೆಯ ಬದಿಯಲ್ಲಿ ನಿಂತಿದ್ದ ಐದು ಜನರ ಮೇಲೆ ಬಿಎಂಟಿಸಿ ಬಸ್ ಹರಿದು ಓರ್ವ ಯುವತಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಬೆಂಗಳೂರಲ್ಲಿ ಇಂದು ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ.
ಹೌದು ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರೇಷ್ಮೆ ಸಂಸ್ಥೆಯ ಮೆಟ್ರೋ ಸ್ಟೇಷನ್ ಬಳಿ ಈ ಒಂದು ಘಟನೆ ನಡೆದಿದೆ. ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಆತನನ್ನು ಶಿಫ್ಟ್ ಮಾಡಲಾಗಿದೆ. ಕೆಆರ್ ಮಾರ್ಕೆಟ್ ನಿಂದ ಹಂಚಿಪುರ ಕಾಲೋನಿಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. KA 01 4168 ಸಂಖ್ಯೆಯ ಬಿಎಂಟಿಸಿ ಬಸ್ ನಿಂದ ಈ ಅಪಘಾತ ಸಂಭವಿಸಿದೆ.