ಬೆಂಗಳೂರು : ಮುಡಾದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ಇಡಿ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದರು. ಈ ಒಂದು ಪ್ರಕರಣದಿಂದ ಸದ್ಯ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ.
ಇದೀಗ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಿಂದ ಇಡಿ ಅರ್ಜಿ ಮಾಡಿರುವ ವಿಚಾರವಾಗಿ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರು. ನನ್ನ ಪತ್ನಿ ಪಾತ್ರವೂ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಅದೇ ಸತ್ಯವಾಗಿದೆ. ಬಿಜೆಪಿ ಕ್ಷಮೆ ಕೇಳಬೇಕೆಂದು ಕೈ ನಾಯಕರು ಹೇಳಿಕೆ ನೀಡಿರುವ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪುನಿಂದ ಬಿಜೆಪಿ ಅವರಿಗೆ ಅರ್ಥ ಆಗಿದೆ. ಪ್ರಕರಣದಲ್ಲಿ ಸತ್ಯಾಸತ್ಯತೆ, ನ್ಯಾಯ, ಅನ್ಯಾಯದ ತೀರ್ಮಾನ ಆಗಿದೆ ಸುಪ್ರೀಂಕೋರ್ಟ್ ತೀರ್ಪಿನಿಂದ ಖುಷಿ ಆಗಿದೆ ಅಂತ ಅಲ್ಲ, ಆದರೆ ನ್ಯಾಯ ಅನ್ಯಾಯದ ಪ್ರಶ್ನೆ ಅಷ್ಟೇ ಎಂದು ಪರಮೇಶ್ವರ್ ತಿಳಿಸಿದರು.