ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಐಪಿ ಸೆಟ್ ಗಳನ್ನು ಹೊಂದಿರುವಂತ ರೈತರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಅನಧಿಕೃತ ಐಪಿ ಸೆಟ್ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇರೆಗೆ ಸಕ್ರಮಗೊಳಿಸೋದಕ್ಕೆ ಚಿಂತನೆ ನಡೆಸಿದ್ದಾರೆ.
ರಾಜ್ಯದಲ್ಲಿರುವ ಅನಧಿಕೃತ ಕೃಷಿ ಪಂಪ್ಸೆಟ್ (ಐಪಿ ಸೆಟ್)ಗಳನ್ನು ಕುಸು ಮ್ -ಬಿ ಅಡಿಯಲ್ಲಿ ಆದ್ಯತೆ ಮೇರೆಗೆಅಧಿಕೃತಗೊಳಿಸಲು ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಸೆಟ್ಗಳ ಪೈಕಿ 2 ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಉಳಿದ ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅನಧಿಕೃತ ಐಪಿ ಸೆಟ್ಗಳನ್ನು ಕುಸುಮ್ ಬಿ ಯೋಜನೆ ಅಡಿ ಆದ್ಯತೆಮೇರೆಗೆಅಧಿಕೃತಗೊಳಿ ಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕುಸುಮ್ ಬಿ ಯೋಜನೆ ಅಡಿ ಸೋಲಾರ್ ಐಪಿ ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಶೇ. 30, ರಾಜ್ಯ ಸರ್ಕಾರ ಶೇ. 50ರಷ್ಟು ಸಬ್ಸಿಡಿ ನೀಡುತ್ತದೆ. ಉಳಿದ ಮೊತ್ತ ಶೇ. 20ರಷ್ಟನ್ನು ರೈತರು ಭರಿಸಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:
• ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ.
• ಈ ಯೋಜನೆಯಡಿ 40ಸಾವಿರ ಪಂಪ್ಸೆಟ್ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚಿಸಿದರು.
• 25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:
• ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ.
• ಈ…— DIPR Karnataka (@KarnatakaVarthe) July 22, 2025
• 4.5ಲಕ್ಷ ಅನಧಿಕೃತ ಐಪಿ ಸೆಟ್ಗಳ ಪೈಕಿ 2ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ. ಈ ಅನಧಿಕೃತ ಐಪಿ ಸೆಟ್ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇರೆಗೆ ತರುವ ಬಗ್ಗೆ ಚರ್ಚೆ.
• ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ಫಾರ್ಮರ್ಗಳನ್ನು ಇಲಾಖೆ ಒದಗಿಸಲಿದೆ.
• ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು ಫೆಬ್ರವರಿ 2025 ವರೆಗೆ ರೂ. 11720ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ
• ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.