ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಮತ್ತು ಅವರ ಪತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.
ಮೃತ ದಂಪತಿಗಳನ್ನು ಪತಿ ಯಾಸಿನ್ ಖಾನ್ (45) ಹಾಗೂ ಪತಿ ನೂರಿ (35) ಎಂದು ತಿಳಿಬಂದಿದೆ.ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲೂಕಿನ, ಕುಡುಮಲಕುಂಟೆಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಗೌರಿಬಿದನೂರು ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು.
ಡಿಕ್ಕಿ ರಭಸಕ್ಕೆ ಯಾಸಿನ್ ಖಾನ್ ಸ್ಥಳದಲ್ಲಿ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಪತಿಯನ್ನು ಬೆಂಗಳೂರಿನ ವಿಕ್ಟೋರಿಯೊ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಯಾಸಿನ್ ಮೃತಪಟ್ಟಿದ್ದಾರೆ. ಮೃತ ನೂರಿ ಮದುವೆಯಾಗಿ 15 ವರ್ಷದ ಬಳಿಕ ಗರ್ಭಿಣಿಯಾಗಿದ್ದಳು. ತಂದೆ -ತಾಯಿ ಆಗುವ ಖುಷಿಯಲ್ಲಿ ದಂಪತಿ ಇದ್ದರು.