Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರಾವಣ ಮಾಸದಲ್ಲಿ ‘ಮಾಂಸ, ಮೀನು’ ತಿನ್ನುವುದು ಕಷ್ಟಕ್ಕೆ ಕಾರಣವಾಗುತ್ತಾ.? ನೀವು ತಿಳಿಯಲೇಬೇಕಾದ ವಿಷಯವಿದು!

26/07/2025 3:37 PM

ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ವಶಕ್ಕೆ ಪಡೆದ ಪೊಲೀಸರು

26/07/2025 3:15 PM

BREAKING : ಶಾಸಕ ಪ್ರಭು ಚೌಹಾನ್ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ : ತನಿಖೆ ಚುರುಕುಗೊಳಿಸಿದ ಪೊಲೀಸರು

26/07/2025 3:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನುಕಂಪದ ನೇಮಕಾತಿ ಪತ್ರ, KSRTC ಮೃತ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
KARNATAKA

ಅನುಕಂಪದ ನೇಮಕಾತಿ ಪತ್ರ, KSRTC ಮೃತ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

By kannadanewsnow0925/07/2025 2:53 PM

ಬೆಂಗಳೂರು: ಇಂದು ಅನುಕಂಪದ ಆಧಾರದ ಮೇಲೆ ಕರಾಸಾ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಅಲ್ಲದೇ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 2.60 ಕೋಟಿ ಪರಿಹಾರ ಹಾಗೂ ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್ಸುಗಳ ಉದ್ಘಾಟನೆಯನ್ನು ಮಾಡಿದರು.

ಇಂದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ, ರಾಮಲಿಂಗಾರೆಡ್ಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಮೊಹಮ್ಮದ್ ರಿಜ್ವಾನ್ ನವಾಬ್, ಮಾನ್ಯ ಉಪಾಧ್ಯಕ್ಷರು, ಕರಾರಸಾ ನಿಗಮ ರವರು 05 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ವಾಹನಗಳನ್ನು ಉದ್ಘಾಟನೆ ಮಾಡಿದರು.

1)ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ವಿತರಣೆ

  • ನಿಗಮದಲ್ಲಿ ಕಳೆದ 10 ವರ್ಷಗಳಿಂದ ಅನುಕಂಪದ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿದ್ದು, ಮಾನ್ಯ ಸಚಿವರ ಸೂಚನೆ ಮೇರೆಗೆ ಅನುಕಂಪದ ಆಧಾರದ ಮೇಲೆ ನೌಕರಿಗೆ ಪ್ರಕ್ರಿಯೆಯು ಪ್ರಾರಂಭಗೊಂಡ ಕಳದೆ 01 ವರ್ಷದ ಅವಧಿಯಲ್ಲಿ 271 ವಿವಿಧ ಹುದ್ದೆಗಳನ್ನು (ಕರಾಸಾ ಪೇದೆ-152, ಕಛೇರಿ ಸಹಾಯಕ (ಸ್ವಚ್ಛತೆ)-60, ತಾಂತ್ರಿಕ ಸಹಾಯಕ-37, ಚಾಲಕ ಕಂ ನಿರ್ವಾಹಕ-22) ಭರ್ತಿ ಮಾಡಲಾಗಿದೆ.
  • ಇಂದು 45 ಅಭ್ಯರ್ಥಿಗಳಿಗೆ ಕರಾಸಾ ಪೇದೆ ಹುದ್ದೆಯ ನೇಮಕಾತಿ ಆದೇಶವನ್ನು ವಿತರಣೆ ಮಾಡಿದರು.

ಸಾರಿಗೆ ಸಿಬ್ಬಂದಿಗಳು ಹಗಲು – ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ಸಚಿವರು ತಿಳಿಸಿದರು.

2) ಸಾರಿಗೆ ಸುರಕ್ಷಾ ವಿಮಾ ಯೋಜನೆ:

  • ಸಂಸ್ಥೆಯು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.
  • ಇದುವರೆವಿಗೂ 26 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಓರ್ವ ಸಿಬ್ಬಂದಿಯ ಅವಲಂಬಿತರಿಗೆ ರೂ. 1 ಕೋಟಿ ಚೆಕ್ ನೀಡಲಾಗಿದೆ.
  • ಒಟ್ಟಾರೆ 27 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟಾರೆ ರೂ.27 ಕೋಟಿ ಪರಿಹಾರ ನೀಡಿದಂತಾಗುತ್ತದೆ.

3) ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:

Ø ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು ದಿನಾಂಕ: 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಇದುವರೆವಿಗೂ 125 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಲಾಗಿರುತ್ತದೆ.

Ø ಇಂದು 26 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳಂತೆ ಒಟ್ಟು ರೂ.2.60 ಕೋಟಿ ಪರಿಹಾರದ ಚೆಕ್ ಅನ್ನು ವಿತರಿಸಲಾಯಿತು.

Ø ಈವರೆಗೂ 151 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟು ರೂ. 15.10 ಕೋಟಿಗಳ ಪರಿಹಾರ ನೀಡಿರುವುದಾಗಿ ತಿಳಿಸಿದರು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಅಪಘಾತದಿಂದ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವಾನ ಹೇಳಿ, ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ, ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಬಡ್ಡಿ  ವ್ಯಾಮೋಹಕ್ಕೆ  ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡದಂತೆ  ಕಿವಿ ಮಾತು ಹೇಳಿದರು. ಹಣವಿದ್ದರೆ ಎಲ್ಲರು ನೆಂಟರೆ ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಲು ತಿಳಿಸಿದರು.

4) ಕೆಎಸ್ಆರ್ಟಿಸಿ ಗೆ 05 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಚಾಲನೆ

ಡಿಸೆಂಬರ್-2024ರ ಮಾಹೆಯಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿಗಳು 20 ಐರಾವತ ಕ್ಲಬ್ ಕ್ಲಸ್ 2.0 ವಾಹನಗಳಿಗೆ ಚಾಲನೆ ನೀಡಿದ್ದು, ಅದರ ಮುಂದುವರೆದ ಭಾಗವಾಗಿ ಇಂದು 05 ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

ಬೆಂಗಳೂರು -ತಿರುಪತಿ – 01

ಮಂಗಳೂರು -ಬೆಂಗಳೂರು-02

ಮೈಸೂರು -ಮಂತ್ರಾಲಯ-02

ಈ ವಾಹನವು 15 ಮೀಟರ್ ಉದ್ದವಿದ್ದು ಕೆಳಕಂಡ ಪ್ರಮುಖ ವಿಶಿಷ್ಟತೆಗಳನ್ನು ಹೊಂದಿರುತ್ತದೆ.

Ø 51 ಆಸನಗಳು 2×2 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.

Ø ಇದು ಶಕ್ತಿಯುತ ಹಾಲೋಜನ್ ಹೆಡ್ಲೈಟ್ಗಳು ಮತ್ತು ಡೇಟೈಮ್ ರನ್ನಿಂಗ್ ಲೈಟ್ಗಳನ್ನು (DRL) ಹೊಂದಿರುತ್ತದೆ.

Ø ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್ಟೀರಿಯರ್ಸ್ನ್ನು ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

Ø ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.

Ø ಒಟ್ಟು ಬಸ್ ಉದ್ದದಲ್ಲಿ 3.5% ಏರಿಕೆಯಿಂದ ಪ್ರಯಾಣಿಕರ ಆಸನಗಳ ನಡುವೆ ಹೆಚ್ಚು ಸ್ಥಳವನ್ನು ಒದಗಿಸುತ್ತದೆ. ಒಟ್ಟು ಬಸ್ ಎತ್ತರದಲ್ಲಿ 5.6% ಏರಿಕೆಯಿಂದ ಹೆಚ್ಚಿನ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

Ø ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ.

Ø ಹಳೆಯ ಬಸ್ಗಳಿಗಿಂತ 20% ಹೊಂದಿರುವುದರಿಂದ ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ದೊಡ್ಡ ಲಗೇಜ್ ಸ್ಥಳ, ಇದರಿಂದಾಗಿ ಇಷ್ಟು ದೊಡ್ಡ ಲಗೇಜ್ ಸ್ಥಳವನ್ನು ಹೊಂದಿರುವ ಮೊದಲ ಬಸ್ ಆಗಿದೆ.

Ø ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು, ಯುಎಸ್ಬಿ ಮತ್ತು C-ಟೈಪ್, ಹೊಂದಿಸಲಾಗಿದೆ.

Ø ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಆದ ಅನುಕೂಲವನ್ನು ಒದಗಿಸುತ್ತದೆ.

Ø ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

Ø ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಗಳನ್ನು ಹೊಂದಿವೆ.

Ø ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಸ್ಥಾಪಿಸಲಾಗಿದೆ. ಬೆಂಕಿ ಅಪಘಾತಗಳ ಸಂದರ್ಭದಲ್ಲಿ ನೀರನ್ನು ಸಿಂಪಡಿಸಲು ಪ್ರಯಾಣಿಕರ ಆಸನಗಳ ಎರಡೂ ಬದಿಗಳಲ್ಲಿರುವ 30 ನೊಝಲ್ಗಳ ನೀರು ಪೈಪುಗಳನ್ನು ಅಳವಡಿಸಲಾಗಿದೆ.

Ø ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.

ಅಕ್ರಂ ಪಾಷ, ವ್ಯವಸ್ಥಾಪಕ ನಿರ್ದೇಶಕರು ಕರಾರಸಾ ನಿಗಮ ರವರು ಮಾತನಾಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸುವಂತೆ ತಿಳಿಸಿದರು. ಹಣವನ್ನು ಸದುಪಯೋಗಪಡಿಸ ಕೊಳ್ಳಿ ಯಾರನ್ನು ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ, ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ರಾಮಚಂದ್ರನ್, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ, ಪ್ರಿಯಾಂಗಾ ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ವಾಕರಸಾ ಸಂಸ್ಥೆ, ಡಾ. ಸುಶೀಲಾ ಬಿ. ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕಕರಸಾ ಸಂಸ್ಥೆ, ಡಾ. ನಂದಿನಿದೇವಿ ಕೆ. ಭಾಆಸೇ., ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಮತ್ತು  ಇಬ್ರಾಹಿಂ ಮೈಗೂರ, ಭಾಆಸೇ., ನಿರ್ದೇಶಕರು (ಮಾಹಿತಿ ತಂತ್ರಜ್ಞಾನ), ಕರಾಸಾ ನಿಗಮದ  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತಿರಿದ್ದರು.

SHOCKING: ಸಿಗರೇಟಿಗಿಂತ ಅಗರಭತ್ತಿ ಹೊಗೆ ಹೆಚ್ಚು ಹಾನಿಕಾರಕ: ಅಧ್ಯಯನ | Stick Smoke

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ವಶಕ್ಕೆ ಪಡೆದ ಪೊಲೀಸರು

26/07/2025 3:15 PM1 Min Read

BREAKING : ಶಾಸಕ ಪ್ರಭು ಚೌಹಾನ್ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ : ತನಿಖೆ ಚುರುಕುಗೊಳಿಸಿದ ಪೊಲೀಸರು

26/07/2025 3:07 PM1 Min Read

BIG NEWS : ‘ಶಕ್ತಿ ಯೋಜನೆ’ಯಿಂದ ಮಹಿಳೆಯರ ಖರ್ಚು ಶೇ.30-50 ರಷ್ಟು ಕಡಿಮೆಯಾಗಿದೆ : ಸಿಎಂ ಸಿದ್ದರಾಮಯ್ಯ

26/07/2025 2:53 PM1 Min Read
Recent News

ಶ್ರಾವಣ ಮಾಸದಲ್ಲಿ ‘ಮಾಂಸ, ಮೀನು’ ತಿನ್ನುವುದು ಕಷ್ಟಕ್ಕೆ ಕಾರಣವಾಗುತ್ತಾ.? ನೀವು ತಿಳಿಯಲೇಬೇಕಾದ ವಿಷಯವಿದು!

26/07/2025 3:37 PM

ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ವಶಕ್ಕೆ ಪಡೆದ ಪೊಲೀಸರು

26/07/2025 3:15 PM

BREAKING : ಶಾಸಕ ಪ್ರಭು ಚೌಹಾನ್ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ : ತನಿಖೆ ಚುರುಕುಗೊಳಿಸಿದ ಪೊಲೀಸರು

26/07/2025 3:07 PM

BIG NEWS : ‘ಶಕ್ತಿ ಯೋಜನೆ’ಯಿಂದ ಮಹಿಳೆಯರ ಖರ್ಚು ಶೇ.30-50 ರಷ್ಟು ಕಡಿಮೆಯಾಗಿದೆ : ಸಿಎಂ ಸಿದ್ದರಾಮಯ್ಯ

26/07/2025 2:53 PM
State News
KARNATAKA

ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ವಶಕ್ಕೆ ಪಡೆದ ಪೊಲೀಸರು

By kannadanewsnow0526/07/2025 3:15 PM KARNATAKA 1 Min Read

ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ನ…

BREAKING : ಶಾಸಕ ಪ್ರಭು ಚೌಹಾನ್ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ : ತನಿಖೆ ಚುರುಕುಗೊಳಿಸಿದ ಪೊಲೀಸರು

26/07/2025 3:07 PM

BIG NEWS : ‘ಶಕ್ತಿ ಯೋಜನೆ’ಯಿಂದ ಮಹಿಳೆಯರ ಖರ್ಚು ಶೇ.30-50 ರಷ್ಟು ಕಡಿಮೆಯಾಗಿದೆ : ಸಿಎಂ ಸಿದ್ದರಾಮಯ್ಯ

26/07/2025 2:53 PM

ರಾಯಚೂರು : ನಿತ್ಯ ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಮುಖ್ಯ ಶಿಕ್ಷಕ ಅಮಾನತು

26/07/2025 2:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.