ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಬಾಗಲಕೋಟೆಯ ಸೀಮಿಕೇರಿ ಬೈ ಪಾಸ್ ಬಳಿ ಈ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ರಮೇಶ್ ಹೂಗಾರ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.