ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಹೋಲಿಕೆ ಮಾಡಿ ಸಿದ್ದರಾಮಯ್ಯ ಪುತ್ರ ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ನಾಲ್ವಡಿ ಕೃಷ್ಣರಾಜ ಒಡೆಯರು ಎಲ್ಲಿ? ಸಿಎಂ ಸಿದ್ದರಾಮಯ್ಯ ಎಲ್ಲಿ? ಚಿನ್ನ ಅಡವಿಟ್ಟು ಕೆ ಆರ್ ಎಸ್ ಅಣೆಕಟ್ಟು ಕಟ್ಟಿದವರು ನಾಲ್ವಡಿ ಕೃಷ್ಣರಾಜ ಒಡೆಯರು. ಯತೀಂದ್ರ ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಅಗ್ರಹಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ್ ಅವರು, ಕರ್ನಾಟಕ ರಾಜ್ಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಸಾಕಷ್ಟು ಇದೆ. ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಟ್ಟವರು ನಾಲ್ವಡಿ ಕೃಷ್ಣರಾಜ ಒಡೆಯರ್. ಮುಡಾದಲ್ಲಿ 14 ಸೈಟ್ ನನಗೆ ಬೇಕೆಂದ ಸಿಎಂ ಸಿದ್ದರಾಮಯ್ಯ ಅವರನ್ನು ಕೆ ಆರ್ ಎಸ್ ಡ್ಯಾಮ್ ಕಟ್ಟಿದವರಿಗೆ ಹೋಲಿಕೆ ಮಾಡುವುದು ಹಾಸ್ಯಾಸ್ಪದ ಎಂದರು.
ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರು ಚಿನ್ನ ಅಡವಿಟ್ಟು ಕೆಆರ್ಎಸ್ ಅಣೆಕಟ್ಟು ನಿರ್ಮಾಣ ಮಾಡಿದ್ದಾರೆ. ಪುಣ್ಯಕ್ಕೆ ಮಹಾತ್ಮ ಗಾಂಧೀಜಿ ಅವರಿಗೆ ಹೋಲಿಕೆ ಮಾಡಿಲ್ವಲ್ಲ. ರಾಜಮನೆತನ ಮೈಸೂರಿನ ಜನರಿಗೆ ಮಾಡಿರುವ ಅಪಮಾನ. ಕೂಡಲೇ ಯತೀಂದ್ರ ರಾಜ್ಯದ ಜನರಿಗೆ ಕ್ಷಮೆ ಕೇಳಬೇಕು ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.