ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿಂದ ಹಾಸನ ಜಿಲ್ಲೆಯ ಒಂದರಲ್ಲಿ ಹೃದಯಘಾತದಿಂದ ಸುಮಾರು 45ಕ್ಕೂ ಹೆಚ್ಚು ಜನರು ಸಾವನಪ್ಪಿದ್ದಾರೆ ಅಷ್ಟೇ ಅಲ್ಲದೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕೂಡ ಹೃದಯಾಘಾತದಿಂದ ಸರಣಿ ಸಾವುಗಳು ಸಂಭವಿಸಿವೆ. ಇದೀಗ ಬೆಂಗಳೂರಲ್ಲಿ ಸೆಕ್ಯೂರಿಟಿ ಗಾರ್ಡ್ ಒಬ್ಬರು ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಹೌದು ಹೃದಯಾಘಾತದಿಂದ ಕುಸಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ಒಬ್ಬರು ಸಾವನ್ನಪ್ಪಿರುವ ಘಟನೆ ಮೀಣ್ಣಾಪುರ ಗ್ರಾಮದಲ್ಲಿ ನಡೆದಿದೆ. ಮೀಣ್ಣಾಪುರ ಗ್ರಾಮದ ನಿವಾಸಿ ರುದ್ರೇಶ್ (38) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೀಣ್ಣಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಖಾಸಗಿ ಕಂಪನಿಯಲ್ಲಿ ರುದ್ರೇಶ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಸಂಜೆ ಮನೆಯಲ್ಲಿದ್ದಾಗಲೇ ರುದ್ರೇಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಎದೆ ನೋವಿನಿಂದ ರುದ್ರೇಶ್ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕುಟುಂಬಸ್ಥರು ಕರೆದುಕೊಂಡು ಹೋಗಿದ್ದಾರೆ ಈ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ರುದ್ರೇಶ್ ಸಾವನಪ್ಪಿದ್ದಾರೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.