ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿ ಈ ಒಂದು ಘಟನೆ ನಡೆದಿದೆ.
ಕೃಷಿ ಹೊಂಡದ ನೀರಿನಲ್ಲಿ ಮುಳುಗುತ್ತಿದ್ದವನ ರಕ್ಷಣೆಗೆ ಹೋಗಿ ಮತ್ತೊಬ್ಬ ಸಹ ಸಾವನಪ್ಪಿದ್ದಾನೆ. ಓರ್ವ ಬಾಲಕನ ಶವವನ್ನು ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದಿದ್ದು ಮತ್ತೊಬ್ಬ ಬಾಲಕನ ಶವಕ್ಕಾಗಿ ಅಗ್ನಿಶಾಮಕದಳ ಶೋಧ ಕಾರ್ಯ ನಡೆಸುತ್ತಿದೆ.ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.