ಹಾಸನ : ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಭಾಗಿಯಾಗಿದ್ದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡಿದ್ದು ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಬೆಂಬಲಿಗರು ಘೋಷಣೆ ಕೂಗಿದ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಕೋಡಿಮಠದ ಬಳಿ ನಡೆದಿದೆ. ಕೋಡಿ ಮಠದ ಸ್ವಾಮೀಜಿ ಜೊತೆ ಚರ್ಚಿಸಿ ಹೊರ ಬಂದಾಗ ಘೋಷಣೆ ಕೂಗಲಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿಕೆ ಶಿವಕುಮಾರ್ ತಾಳೆಗರಿ ಭವಿಷ್ಯ ಕೇಳಿದ್ದಾರೆ. ಸ್ವಾಮೀಜಿ ಭೇಟಿಯಾಗಿ ಡಿಕೆ ಶಿವಕುಮಾರ್ ಹೊರ ಬಂದಾಗ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದರು.