ಹಾಸನ : ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು.ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದ ಡಿಕೆಶಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿ ಮಠಕ್ಕೆ ಭೇಟಿ ನೀಡಿ ದರ್ಶನ ಮಾಡಿದ್ದಾರೆ. ಕೋಡಿ ಶ್ರೀಗಳ ಭೇಟಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಏನು ಪ್ರಾರ್ಥನೆ ಮಾಡಬೇಕು ಮಾಡಿದ್ದೇನೆ ಎಂದಿದ್ದಾರೆ. ಇದೇ ವೇಳೆ ಸ್ವಾಮೀಗಳು ಊರಿನಲ್ಲಿ ಇದ್ದಾರೆ ಎಂಬುದು ಗೊತ್ತಾಯ್ತು. ಹೀಗಾಗಿ ಭೇಟಿಗೆ ಬಂದಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಧರ್ಮದ ಬಗ್ಗೆ, ದೇವರ ಬಗ್ಗೆ, ಸಂಸ್ಕೃತಿ ಬಗ್ಗೆ, ಆಚಾರ-ವಿಚಾರಗಳ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದೇನೆ. ಯಾವುದೇ ಧರ್ಮದಲ್ಲಾಗಲಿ ಒಂದು ಶಕ್ತಿ ಇದೆ. ಕೆಲವರು ನಂಬಬಹುದು, ಕೆಲವರು ನಂಬದೇ ಇರಬಹುದು. ಆದರೆ ನನಗೆ ನಂಬಿಕೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನಂಬಿಕೆ ಇರುವ ಕಾರಣ ಇಷ್ಟು ದೂರ ಬಂದಿದ್ದೇನೆ. ಈ ಹಿಂದೆ ನಾನು, ಮನೆಯವರು ಈ ಕ್ಷೇತ್ರಕ್ಕೆ ಬಂದಿದ್ದೇವು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.