ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಅಬ್ಬರ ಮುಂದುವರೆದಿದ್ದು,ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಹವಾಮಾನ ಇಲಾಖೆ ಇಂದು ರೆಡ್ ಅಲರ್ಟ್ ಘೋಷಿಸಿದೆ.
ಇಂದಿನಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದ್ದು, ವರುಣಾರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಅಂದ್ರೆ ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ಸೇರಿದಂತೆ ಉಳಿದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ, ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.