ಬೆಂಗಳೂರು : ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದು, ಹಲೋ ದರ್ಶನ್ ಅಭಿಮಾನಿಗಳೇ ನನ್ನ ಇನ್ ಸ್ಟಾಗ್ರಾಮ್ ಖಾತೆಗೆ ಸ್ವಾಗತ ಎಂದು ಹೇಳಿದ್ದಾರೆ.
ಇನ್ ಸ್ಟಾಗ್ರಾಂನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ನಟಿ ರಮ್ಯಾ, ನನಗೆ ಮಾಡುತ್ತಿರುವ ಕಮೆಂಟ್ ಗೆ ಇಲ್ಲಿದೆ ನೋಡಿ ಉತ್ತರ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಪೋಸ್ಟ್ ಮಾಡಿದ್ದಾರೆ.
ಇನ್ನೂ ನಿನ್ನೆಯಷ್ಟೇ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಪೋಸ್ಟ್ ಮಾಡಿದ್ದರು. ನಟಿ ರಮ್ಯಾ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ಇನ್ಸ್ಟಾದಲ್ಲಿ ಸ್ಟೇಟಸ್ ಹಾಕಿದ್ದಾರೆ. ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್ ಹಾಕಿದ್ದಾರೆ.
