ಕಲಬುರಗಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,079 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ ಕಾಲ ದೇಶವನ್ನು ಮುನ್ನಡೆಸುತ್ತಿರುವ ಎರಡನೇ ಪ್ರಧಾನಿ ಆಗಿ ಹೊರಹೊಮ್ಮಿದ್ದಾರೆ. ಇದು ಹೊಸ ದಾಖಲೆ. ಇದಕ್ಕಾಗಿ ನಾಡಿನ, ದೇಶದ ಜನರ ಪರವಾಗಿ ಅಭಿನಂದನೆಗಳು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ನರೇಂದ್ರ ಮೋದಿಜೀ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಲ್ಲ; ದೇಶ ಸೇವಕ ಎಂಬ ವಿಚಾರ ಇಟ್ಟುಕೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ. ಮೋದಿಜೀ ಅವರು ತುರ್ತು ಪರಿಸ್ಥಿತಿ ಹೇರಿದವರಲ್ಲ. ಯಾವುದೇ ಒಂದು ಅನುಕಂಪದ ಆಧಾರದಲ್ಲಿ ಸತತವಾಗಿ ಈ ದೇಶದ ಆಡಳಿತ ನಡೆಸುತ್ತಿಲ್ಲ ಎಂದು ತಿಳಿಸಿದರು.
ಅವರು ಪ್ರಾಮಾಣಿಕರಾಗಿ, ಪರಿಶ್ರಮದಿಂದ ಅಭಿವೃದ್ಧಿ ಮಾಡುವ ಮೂಲಕ 3ನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಸುದೀರ್ಘವಾಗಿ ದೇಶ ಮುನ್ನಡೆಸುತ್ತಿದ್ದಾರೆ. ಮುಂದೆಯೂ ಕೂಡ ಈ ದೇಶವನ್ನು ಸದೃಢವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದದ್ದು ಹೇಗೆ?
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಮೂಲಕ ರಾಹುಲ್ ಗಾಂಧಿಯವರು ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದ್ದಾರೆ. ಈ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಧ್ವನಿಗೂಡಿಸಿದ್ದಾರೆ.
ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ರಾಹುಲ್ ಗಾಂಧಿ ಮತ್ತಿತರರು ಇಂಥ ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಆ ಚುನಾವಣಾ ಆಯೋಗದ ಅಪಮಾನ ಮಾತ್ರವಲ್ಲ; ಪ್ರಜಾಪ್ರಭುತ್ವ ವಿರೋಧಿ ನಡೆಯೂ ಹೌದು ಎಂದು ಆಕ್ಷೇಪಿಸಿದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಸೋದರ ಡಿ.ಕೆ.ಸುರೇಶ್ ಅವರು ಇದೇ ಅಕ್ರಮದಿಂದ ಸೋತಿದ್ದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಚುನಾವಣಾ ಅಕ್ರಮ ನಡೆದಿದ್ದರೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ 136 ಶಾಸಕರ ಬಲದೊಂದಿಗೆ ಯಾಕೆ ಅಧಿಕಾರಕ್ಕೆ ಬರುತ್ತಿತ್ತು ಎಂದು ಕೇಳಿದರು.
ಕೇಂದ್ರ ಸರಕಾರ, ನರೇಂದ್ರ ಮೋದಿಜೀ, ಬಿಜೆಪಿ ಸೇರಿ ಚುನಾವಣಾ ಆಯೋಗದ ದುರ್ಬಳಕೆ ಮಾಡಿದ್ದಿದ್ದರೆ ನೀವು ಮುಖ್ಯಮಂತ್ರಿಯಾಗಲು ಸಾಧ್ಯವಿತ್ತೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ಈಚೆಗೆ 3 ಉಪ ಚುನಾವಣೆಯಲ್ಲೂ ಗೆದ್ದ್ದರಲ್ಲವೇ? ಆಗ ಚುನಾವಣಾ ಆಯೋಗದಿಂದ ದುರ್ಬಳಕೆ ಆಗಿಲ್ಲವೇ ಎಂದು ಕೇಳಿದರು.
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿಯ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನವಿದು,ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ನಾಡಿನ ಜನರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
BREAKING: ಬೆಂಗಳೂರಲ್ಲಿ ಮಾವ, ಅಳಿಯನ ಜಗಳ ಬಿಡಿಸಲು ಹೋದ ಕಾನ್ಸ್ ಟೇಬಲ್ ಗೆ ಚಾಕು ಇರಿತ