ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ಮಿಲಿಂದ್ ಖರ್ಗೆ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ ನಿಂದ ಎಂಬಿಎ ಪದವಿಯನ್ನು ಖರ್ಗೆ ಪುತ್ರ ಮಿಲಿಂದ್ ಖರ್ಗೆ ಪಡೆದಿದ್ದರು. ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಅವರು, ರಾಜಕೀಯದಿಂದ ದೂರವೇ ಉಳಿದಿದ್ದರು. ಅಲ್ಲದೇ ಸಾರ್ವಜನಿಕವಾಗಿಯೂ ಕಾಣಿಸಿಕೊಂಡಿಲ್ಲ.
ಕೆಲ ದಿನಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವಂತ ಮಿಲಿಂದ್ ಖರ್ಗೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯುನಲ್ಲಿ ಇರುವಂತ ಅವರ ಸ್ಥಿತಿ ಈಗ ಗಂಭೀರ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಕೃತಿಗಳ ಆಹ್ವಾನ
‘ಕನ್ನಡ ತಂತ್ರಾಂಶ ಬಳಗ’ಕ್ಕೆ ದಶಮಾನೋತ್ಸವ ಸಂಭ್ರಮ: ಮಿಮಿಕ್ರಿಯಲ್ಲಿ 2ನೇ ಬಹುಮಾನ ಪಡೆದ ‘ಚಿತ್ರಲಿಂಗಯ್ಯ’