ಕೋಲಾರ : ಕೋಲಾರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಗೊಲ್ಲಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಮೃತರು ಪೌಲ್ಟ್ರಿ ಫಾರಂನಲ್ಲಿ ಇಬ್ಬರು ಕಾರ್ಮಿಕರು ಕೆಲಸ ಮಾಡುತಿದ್ದರು. ಮೃತರನ್ನು ಅಭಿಷೇಕ್ ಗೌಡ (30) ಮತ್ತು ಸಭ್ಯ (29) ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಬೇತಮಂಗಲ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.