ಬೆಂಗಳೂರು : ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಪೊಲೀಸರು ಎಷ್ಟೇ ಕಠಿಣವಾದ ಕ್ರಮ ತೆಗೆದುಕೊಂಡರು ಸಹ ಕಿಡಿಗೇಡಿಗಳು ತಮ್ಮ ದುಷ್ಕೃತ್ಯ ಮುಂದುವರಿಸಿದ್ದಾರೆ. ಇದೀಗ ರಸ್ತೆಬದಿ ನಿಲ್ಲಿಸಿಂದ ಬೈಕ್ ಗಳಿಗೆ, ಅಂಗಡಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ.
ಹೌದು ಇಂದು ಬೆಂಗಳೂರಿನ ಹಲಸೂರು ಬಳಿ ಇಂದು ಮುಂಜಾನೆ ರಸ್ತೆ ಬದಿ ನಿಂತಿದ್ದ 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿಯಾಗಿದೆ.ಸ್ಥಳೀಯ ನಿವಾಸಿಗಳು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಇದೀಗ ಹಲಸೂರಿನಲ್ಲಿ ಬೈಕ್ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಿಡಿಗೇಡಿಗಳ ದೃಶ್ಯ ಪತ್ತೆಯಾಗಿದೆ. ಅಂಗಡಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.