ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ಸ್ ಗಳ ಹೌದು ಬೆಂಗಳೂರಲ್ಲಿ ಬಿಲ್ಡರ್ಸ್ ಗಳ ಮನೆಗಳ ಮೇಲೆ ಐಟಿ ದಾಳಿ ಮಾಡಿದೆ. ಐಟಿ ಅಧಿಕಾರಿಗಳು ಬಿಲ್ಡರ್ಸ್ ಗಳ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ತೆರಿಗೆ ಬಾಕಿ ಹಿನ್ನೆಲೆ ಆರೋಪದ ಮೇಲೆ ಬೆಂಗಳೂರಿನಲ್ಲಿರುವ ಬಿಲ್ಡರ್ಸ್ ಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ಮಾಡಿದ್ದಾರೆ. ಯಲಹಂಕ ಸೇರಿದಂತೆ 12 ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಲ್ಡರ್ಸ್ ಗಳ ಮನೆಯ ಮೇಲೆ ದಾಳಿ ಮಾಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.ಈ ಕುರಿತು ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.